Acts 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
Kannada BSI Bible 2016
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.
Kannada Bible (KNCL) BSI 2016
ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.