Acts 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
Kannada BSI Bible 2016
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.