Acts 15:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
Kannada BSI Bible 2016
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು
Kannada Bible (KNCL) BSI 2016
ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.