Acts 15:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
Kannada BSI Bible 2016
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
Kannada Bible (KNCL) BSI 2016
“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.