Acts 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
Kannada BSI Bible 2016
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು
Kannada Bible (KNCL) BSI 2016
ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.