Acts 15:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
Kannada BSI Bible 2016
ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
Kannada Bible (KNCL) BSI 2016
ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು.