Acts 15:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
Kannada BSI Bible 2016
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
Kannada Bible (KNCL) BSI 2016
ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.