Acts 15:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
Kannada BSI Bible 2016
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು
Kannada Bible (KNCL) BSI 2016
ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.