Acts 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
Kannada BSI Bible 2016
ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
Kannada Bible (KNCL) BSI 2016
ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.