Acts 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
Kannada BSI Bible 2016
ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು.
Kannada Bible (KNCL) BSI 2016
ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.