Acts 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
Kannada BSI Bible 2016
ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
Kannada Bible (KNCL) BSI 2016
ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.