Acts 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
Kannada BSI Bible 2016
ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವದೆಂದು ನೆನಸಿ ಸಬ್ಬತ್‍ದಿನದಲ್ಲಿ ಊರಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕೂತುಕೊಂಡು ಮಾತಾಡಿದೆವು.
Kannada Bible (KNCL) BSI 2016
ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.