Acts 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
Kannada BSI Bible 2016
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.
Kannada Bible (KNCL) BSI 2016
ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.