Acts 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
Kannada BSI Bible 2016
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.
Kannada Bible (KNCL) BSI 2016
ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.