Acts 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
Kannada BSI Bible 2016
ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.
Kannada Bible (KNCL) BSI 2016
ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.