Acts 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
Kannada BSI Bible 2016
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.
Kannada Bible (KNCL) BSI 2016
ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.