Acts 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಪೌಲ ಸೀಲರಿಗೆ ವಿರೋಧವಾಗಿದ್ದರು. ಆಗ ನಾಯಕರು ಪೌಲ ಸೀಲರ ಬಟ್ಟೆಗಳನ್ನು ಹರಿದುಹಾಕಿಸಿ ಅವರಿಬ್ಬರಿಗೂ ಕೋಲುಗಳಿಂದ ಬಲವಾಗಿ ಹೊಡೆಸಿ, ಸೆರೆಮನೆಗೆ ಹಾಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
Kannada BSI Bible 2016
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೊಂಬೀ ಜನರು ಕೂಡಿ ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು; ಮತ್ತು ಅಧಿಪತಿಗಳು - ಇವರ ವಸ್ತ್ರಗಳನ್ನು ಹರಿದು ತೆಗೆದು ಚಡಿಗಳಿಂದ ಹೊಡೆಯಬೇಕೆಂದು ಅಪ್ಪಣೆಕೊಟ್ಟರು.
Kannada Bible (KNCL) BSI 2016
ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.