Acts 16:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Kannada BSI Bible 2016
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Kannada Bible (KNCL) BSI 2016
ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.