Acts 16:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
Kannada BSI Bible 2016
ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.
Kannada Bible (KNCL) BSI 2016
ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.