Acts 16:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
Kannada BSI Bible 2016
ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
Kannada Bible (KNCL) BSI 2016
ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.