Acts 16:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
Kannada BSI Bible 2016
ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು.
Kannada Bible (KNCL) BSI 2016
ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.