Acts 16:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
Kannada BSI Bible 2016
ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.
Kannada Bible (KNCL) BSI 2016
ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.