Acts 16:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
Kannada BSI Bible 2016
ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೇಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ - ಅಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
Kannada Bible (KNCL) BSI 2016
ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.