Acts 16:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಪೌಲನು - ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡುಹೋದರೆ ಸರಿ ಎಂದು ಹೇಳಿದನು.
Kannada Bible (KNCL) BSI 2016
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.