Acts 16:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
Kannada BSI Bible 2016
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
Kannada Bible (KNCL) BSI 2016
ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.