Acts 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
Kannada BSI Bible 2016
ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
Kannada Bible (KNCL) BSI 2016
ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.