Acts 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
Kannada BSI Bible 2016
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ
Kannada Bible (KNCL) BSI 2016
ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.