Acts 16:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು. ಈ ದರ್ಶನದಲ್ಲಿ ಮಕೆದೋನಿಯದ ನಾಡಿನಿಂದ ಬಂದ ಒಬ್ಬ ಮನುಷ್ಯನು ಅಲ್ಲಿ ನಿಂತುಕೊಂಡು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡು” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
Kannada BSI Bible 2016
ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.