Acts 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Kannada BSI Bible 2016
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Kannada Bible (KNCL) BSI 2016
ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.