Acts 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
Kannada BSI Bible 2016
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.
Kannada Bible (KNCL) BSI 2016
ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.