Acts 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
Kannada BSI Bible 2016
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.
Kannada Bible (KNCL) BSI 2016
ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.