Acts 17:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
Kannada BSI Bible 2016
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.
Kannada Bible (KNCL) BSI 2016
ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.