Acts 17:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
Kannada BSI Bible 2016
(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
Kannada BSI JV (ಕನ್ನಡ ಸತ್ಯವೇದವು J.V. (BSI))
ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.
Kannada Bible (KNCL) BSI 2016
ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.