Acts 17:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
Kannada BSI Bible 2016
ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಅರಿಯೋಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ - ಅಥೇನೆಯ ಜನರೇ, ನೀವು ಎಲ್ಲಾದರಲ್ಲೂ ಅತಿಭಕ್ತಿವಂತರೆಂದು ನನಗೆ ತೋರುತ್ತದೆ.
Kannada Bible (KNCL) BSI 2016
ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.