Acts 17:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘\sc ತಿಳಿಯದ ದೇವರಿಗೆ\sc*’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
Kannada BSI Bible 2016
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.
Kannada Bible (KNCL) BSI 2016
ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.