Acts 17:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
Kannada BSI Bible 2016
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
Kannada Bible (KNCL) BSI 2016
ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.