Acts 17:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
Kannada BSI Bible 2016
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ
Kannada Bible (KNCL) BSI 2016
ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.