Acts 17:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
Kannada BSI Bible 2016
ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಅವರು ತಡಕಾಡಿ ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
Kannada Bible (KNCL) BSI 2016
ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.