Acts 17:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
Kannada BSI Bible 2016
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.
Kannada Bible (KNCL) BSI 2016
ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’
Recommended Reading