Acts 17:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
Kannada BSI Bible 2016
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.
Kannada Bible (KNCL) BSI 2016
ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.