Acts 17:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
Kannada BSI Bible 2016
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
Kannada Bible (KNCL) BSI 2016
ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”