Acts 17:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
Kannada BSI Bible 2016
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
Kannada Bible (KNCL) BSI 2016
ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.