Acts 17:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
Kannada BSI Bible 2016
ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು.
Kannada Bible (KNCL) BSI 2016
ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.