Acts 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
Kannada BSI Bible 2016
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
Kannada Bible (KNCL) BSI 2016
ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.