Acts 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
Kannada BSI Bible 2016
ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
Kannada Bible (KNCL) BSI 2016
ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.