Acts 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
Kannada BSI Bible 2016
ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಪೂಜಿಸುವದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು ದೂರು ಹೇಳಿದರು.
Kannada Bible (KNCL) BSI 2016
“ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.