Acts 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
Kannada BSI Bible 2016
ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.
Kannada Bible (KNCL) BSI 2016
ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.