Acts 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
Kannada BSI Bible 2016
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.
Kannada Bible (KNCL) BSI 2016
ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.