Acts 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
Kannada BSI Bible 2016
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
Kannada Bible (KNCL) BSI 2016
ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.