Acts 18:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
Kannada BSI Bible 2016
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
Kannada BSI JV (ಕನ್ನಡ ಸತ್ಯವೇದವು J.V. (BSI))
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
Kannada Bible (KNCL) BSI 2016
ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.